ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ

Untitled design 3
Published on

ಗಂಗಾವತಿ: ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಖಾಲಿ ಹುದ್ದೆಗಳನ್ನು ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಹಾಗೂ ವಿವಿಧ ಶಾಲೆಯ ಪಾಲಕರು ನಗರದ ಬಿಇಒ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.

ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಬಹುತೇಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಿಂದಲೇ ಕಾರ್ಯನಿರ್ವಹಿಸಲಾಗುತ್ತಿದೆ. 43 ಶಾಲೆಗಳಲ್ಲಿ ಸಿಬ್ಬಂದಿ ಕೊರತೆಯಿದ್ದು, ಕಳೆದ ಎಸ್ಸೆಸ್ಸೆಲ್ಸಿ ಲಿತಾಂಶದ ಮೇಲೆ ಪರಿಣಾಮ ಬೀರಿದೆ. ಕೆಲ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿದ್ದು, ಕುಡಿವ ನೀರು, ಶೌಚಗೃಹದ ವ್ಯವಸ್ಥೆಯಿಲ್ಲ. ಶಿಥಿಲಗೊಂಡ ಕಟ್ಟಡದಲ್ಲಿ ಪಾಠಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜೀವ ಭಯದಿಂದಲೇ ದಿನಗಳನ್ನು ದೂಡುತ್ತಿದ್ದಾರೆ. ಬಿಸಿಯೂಟ ಸೇರಿ ಎಲ್ಲ ಕಾರ್ಯಗಳನ್ನು ಶಿಕ್ಷಕರೇ ನಿಭಾಯಿಸಬೇಕಿದ್ದರಿಂದ ಪಾಠದತ್ತ ಗಮನ ನೀಡಲಾಗುತ್ತಿಲ್ಲ. ಕಂಪ್ಯೂಟರ್ ಅಪರೇಟರ್ ಜತೆಗೆ ಡಿ-ಗ್ರೂಪ್ ಸಿಬ್ಬಂದಿ ನಿಯೋಜಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಎಲ್ಲ ಸೌಲಭ್ಯ ಒದಗಿಸಬೇಕು ಎಂದು ಸಮಿತಿ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಒತ್ತಾಯಿಸಿದರು. ಬಿಇಒ ಬಿ.ನಟೇಶ್‌ಗೆ ಮನವಿ ಸಲ್ಲಿಸಿದರು.

ಪದಾಧಿಕಾರಿಗಳಾದ ಚಂದ್ರು ನಿಸರ್ಗ,ಜಡಿಯಪ್ಪ ಹಂಚಿನಾಳ,ರಾಘು ಕಡೇಬಾಗಿಲು,ದುರುಗೇಶ ಹೊಸಳ್ಳಿ, ಬಸವರಾಜ್ ನಾಯಕ, ರಾಮಣ್ಣ ರುದ್ರಾಕ್ಷಿ, ಸೋಮು, ಸಂತೋಷ, ದೇವರಾಜ್,ಕಿರಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net