ಪೋಲಿಯೋಮುಕ್ತ ಸಮಾಜಕ್ಕೆ ಕೈಜೋಡಿಸಿ

SABHE
ಗಂಗಾವತಿಯ ಜಯನಗರ ರೋಟರಿ ಕ್ಲಬ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪೋಲಿಯೋ ದಿನಾಚರಣೆಯಲ್ಲಿ ಕ್ಲಬ್ ತಾಲೂಕು ಅಧ್ಯಕ್ಷ ಎ.ಶಿವಕುಮಾರ ಮಂಗಳವಾರ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಟಿ.ಆಂಜನೇಯ, ಪದಾಧಿಕಾರಿಗಳಾದ ಮಹೇಶ ಸಾಗರ್, ಜನಾದ್ರಿ ದೊಡ್ಡಯ್ಯ ಇತರರಿದ್ದರು.
Published on

ಗಂಗಾವತಿ: ಪೋಲಿಯೋಮುಕ್ತ ಸಮಾಜಕ್ಕಾಗಿ ರೋಟರಿ ಸಂಸ್ಥೆ ಅಭಿಯಾನ ಹಮ್ಮಿಕೊಂಡಿದ್ದು, ಲಸಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಕ್ಲಬ್ ತಾಲೂಕು ಅಧ್ಯಕ್ಷ ಎ.ಶಿವಕುಮಾರ ಹೇಳಿದರು.

ನಗರದ ಜಯನಗರ ರೋಟರಿಕ್ಲಬ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಪೋಲಿಯೋ ದಿನಾಚರಣೆಯಲ್ಲಿ ಮಾತನಾಡಿದರು. ಯುನಿಸ್ೆ ಮತ್ತು ರೋಟರಿ ಸಂಸ್ಥೆ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಆರಂಭಿಸಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ವಿಶ್ವ ಆರೋಗ್ಯ ಸಂಸ್ಥೆ ನೆರವಿನೊಂದಿಗೆ ಪೋಲಿಯೋಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಟಿ.ಆಂಜನೇಯ ಮಾತನಾಡಿ, ಪೋಲಿಯೋ ಲಸಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಅ.24ರಂದು ವಿಶ್ವ ಪೋಲಿಯೋ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಪದಾಧಿಕಾರಿಗಳಾದ ಮಹೇಶ ಸಾಗರ್, ಜನಾದ್ರಿ ದೊಡ್ಡಯ್ಯ, ಎಚ್.ಎಂ.ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net