ಬಾಕಿ ವೇತನ ಪಾವತಿಗೆ ಒತ್ತಾಯ

GVT-MANAVI
ಬಾಕಿ ವೇತನಕ್ಕೆ ಒತ್ತಾಯಿಸಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗಂಗಾವತಿ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಪ್ರಾಚಾರ್ಯೆ ಪ್ರೊ.ಜಗದೇವಿ ಕಲಶೆಟ್ಟಿಗೆ ಮನವಿ ಸಲ್ಲಿಸಿದರು. ಗೌರವಾಧ್ಯಕ್ಷ ಎ.ಕೆ.ಮಹೇಶಕುಮಾರ, ತಾಲೂಕು ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಇತರರಿದ್ದರು.
Published on

ಗಂಗಾವತಿ: ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಘಟಕದ ಸದಸ್ಯರು ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜು ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಪ್ರಾಚಾರ್ಯೆ ಪ್ರೊ.ಜಗದೇವಿ ಕಲಶೆಟ್ಟಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ, ಸರ್ಕಾರಿ ಪದವಿ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿದ್ದು, ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಲವಾಗಿದೆ. ಕಳೆದ 3 ತಿಂಗಳಿಂದ ವೇತನ ನೀಡದಿದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ.

ಸೇವಾಭದ್ರತೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ವಿವಿಧ ಬೇಡಿಕೆ ಈಚೇರಿಕೆಗಾಗಿ ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಕರ್ತವ್ಯದಲ್ಲಿ ಪಾಲ್ಗೊಳ್ಳಲಾಗುತ್ತಿದ್ದು, ಜು.31ರಂದು ನಗರದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದರು.

ಗೌರವಾಧ್ಯಕ್ಷ ಎ.ಕೆ.ಮಹೇಶಕುಮಾರ, ಕಾರ್ಯದರ್ಶಿ ಗುಂಡೂರು ಪವನ್‌ಕುಮಾರ್, ಪದಾಧಿಕಾರಿಗಳಾದ ಡಾ.ಬಸವರಾಜ ಗೌಡನಬಾವಿ, ನಟರಾಜ್, ವಿಜಯ ಮಹಾಂತೇಶ, ಖಾಜಾಸಾಬ್, ತಾಯಪ್ಪ ಮರ್ಚೇಡ, ಶಿವರಾಜ್, ಕಷ್ಣ ಕುಮಾರ್, ಡಾ.ಮಂಜಣ್ಣ ಪೂಜಾರ, ಸೋಮಶೇಖರ ಜೇಕೀನ್, ದೊಡ್ಡಬಸಮ್ಮ, ರೇಣುಕಾ, ಪರ್ವಿನ್ ಸುಲ್ತಾನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net