ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿ

Untitled design(2)
ಗಂಗಾವತಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ್, ತಾಲೂಕಾಧ್ಯಕ್ಷ ಯು.ನಾಗರಾಜ್ ಇತರರಿದ್ದರು. ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ್, ಪದಾಧಿಕಾರಿಗಳಾದ ಬಾಲಾಜಿ ಚಳ್ಳಾರಿ, ಶಿವಕುಮಾರ, ಎಂ.ಶರ್ೀ, ದರ್ಶನ ಹೊಸ್ಕೇರಾ, ದುರುಗೇಶ, ಬಾಲಪ್ಪ ಗಾಣದಾಳ್, ಸುಮಿತ್ರಾ, ಅಮೃತಾ, ಮಲ್ಲಮ್ಮ, ಮೌನಿಕಾ, ಗೌಸಿಯಾ ಇತರರಿದ್ದರು.
Published on

ಗಂಗಾವತಿ: ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸಲು ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ನಗರದ ತಾಲೂಕಾಡಳಿತ ಸೌಧದ ಮುಂದೆ ಬುಧವಾರ ಪ್ರತಿಭಟಿಸಿದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಪ್ರತಿಭಟಿಸಿದ ನಂತರ ಬೇಡಿಕೆ ಮನವಿಯನ್ನು ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಸಲ್ಲಿಸಿದರು. ತಾಲೂಕಾಧ್ಯಕ್ಷ ಯು.ನಾಗರಾಜ್ ಮಾತನಾಡಿ, ರಾಜ್ಯದ ಬಹುತೇಕ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿದ್ದ 2 ತಿಂಗಳಾದರೂ ಇನ್ನೂ ಅತಿಥಿ ಉಪನ್ಯಾಸಕರನ್ನು ನೇಮಿಸಿಲ್ಲ. ಬಡ, ರೈತ, ಕಾರ್ಮಿಕ, ದಲಿತ, ಹಿಂದುಳಿದ ವಿದ್ಯಾರ್ಥಿಗಳೇ ಓದುತ್ತಿದ್ದು, ಉಪನ್ಯಾಸಕರ ಕೊರತೆಯಿಂದ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಅತಿಥಿ ಉಪನ್ಯಾಸಕರ ನೇಮಕ ಜತೆಗೆ 12 ತಿಂಗಳುವರೆಗೆ ನಿಯೋಜಿಸುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net