ದುಶ್ಚಟಗಳಿಂದ ಏಕಾಗ್ರತೆ ಹಾಳು

background (1)
Published on

ಗಂಗಾವತಿ: ತಾಲೂಕಿನ ಸಂಗಾಪುರ ಜ್ಞಾನಜ್ಯೋತಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಜಾಗೃತಿ ಕಾರ್ಯಾಗಾರ ಗುರುವಾರ ನಡೆಯಿತು.

ಟ್ರಸ್ಟ್‌ನ ಆನೆಗೊಂದಿ ವಲಯದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದು, ದುಶ್ಚಟಗಳಿಂದಾಗುವ ಪರಿಣಾಮ ಕುರಿತು ಜಾಗೃತಿ ಮೂಡಿಸಲಾಯಿತು. ಸಂಪನ್ಮೂಲ ವ್ಯಕ್ತಿ ಮತ್ತು ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜು ಉಪನ್ಯಾಸಕ ಎ.ಕೆ.ಮಹೇಶಕುಮಾರ ಮಾತನಾಡಿ, ದುಶ್ಚಟಗಳು ಏಕಾಗ್ರತೆಯನ್ನು ಹಾಳು ಮಾಡುತ್ತಿದ್ದು, ದೈಹಿಕ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರಲಿವೆ. ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ದುಶ್ಚಟಗಳಿಂದ ದೂರವಿರಲು ಸಾಧ್ಯ. ಮಾದಕ ವಸ್ತು, ದ್ರವ್ಯಗಳ ಬಗ್ಗೆ ಜಾಗ್ರತರಾಗಬೇಕಿದ್ದು, ಇಂತಹ ಪ್ರಕರಣ ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ದುಶ್ಚಟಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಗಾಳೆಮ್ಮ, ಸೇವಾ ಪ್ರತಿನಿಧಿ ನೀಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net