ಮಣ್ಣಿನ ಫಲವತ್ತತೆ ಅರಿತು ಬೇಸಾಯ ಮಾಡುವಂತೆ ಕಾಡಾ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ ಕೃಷಿಕರಿಗೆ ಸಲಹೆ

231221 Gangavati National Farmer's Day
ಗಂಗಾವತಿ ಕೃಷಿ ಸಂಶೋಧನೆ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆಯನ್ನು ಕಾಡಾ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ ಉದ್ಘಾಟಿಸಿದರು.
Published on

ಗಂಗಾವತಿ: ಮಣ್ಣಿನ ಫಲವತ್ತತೆ ಮತ್ತು ನೀರಿನ ಲಭ್ಯತೆಗೆ ಅನುಗುಣವಾದ ಬೇಸಾಯ ಕ್ರಮಕ್ಕೆ ಆದ್ಯತೆ ನೀಡಬೇಕು ಎಂದು ಕಾಡಾ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ ತಿಳಿಸಿದರು.

ನಗರದ ಕೃಷಿ ಸಂಶೋಧನೆ ಕೇಂದ್ರದ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಮತ್ತು ಕೃಷಿಕ ಸಮಾಜದಿಂದ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕೃಷಿ ಪ್ರಧಾನವಾದ ಭಾರತದಲ್ಲಿ ರೈತ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಅವೈಜ್ಞಾನಿಕ ಕೃಷಿ ಪದ್ಧತಿ ಮತ್ತು ಅತಿಯಾದ ರಾಸಾಯನಿಕ ಬಳಕೆಯಿಂದ ಭೂಮಿ ಜವಳಾಗುತ್ತಿದ್ದು, ಇಳುವರಿ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ರೈತರ ಹಿತಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಆವಿಷ್ಕಾರದ ತಳಿಗಳತ್ತ ರೈತರು ಗಮನಹರಿಸಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಬಿಎಸ್ಸಿ ಅಗ್ರಿ ಎಸ್‌ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.

ಸಿರಿಧಾನ್ಯಗಳ ಮೌಲ್ಯವರ್ಧನೆ ಆಹಾರ, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿತ್ತು. ರಾಯಚೂರು ಕೃಷಿ ವಿವಿ ಎಸ್‌ಸಿ, ಎಸ್ಟಿ ಕೋಶ ನಿರ್ದೇಶಕ ಡಾ. ಜಗಜೀವನರಾಂ, ಕೃಷಿಕ ಸಮಾಜದ ಅಧ್ಯಕ್ಷ ಚನ್ನಪ್ಪ ಮಳಗಿ, ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲು, ನಿವೃತ್ತ ಕೃಷಿ ನಿರ್ದೇಶಕ ಜಂಬಣ್ಣ ಐಲಿ, ಕೃಷಿ ಕಾಲೇಜು ಆಡಳಿತಾಧಿಕಾರಿ ಡಾ.ಬಿ.ಜಿ. ಮಸ್ತಾನರೆಡ್ಡಿ, ಪ್ರಗತಿಪರ ರೈತರಾದ ಸಿದ್ದನಗೌಡ, ವೀರನಗೌಡ ಕುಲಕರ್ಣಿ, ಗಾದಿಲಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net