ಶ್ರೀರಾಮನಗರದ ಕೋರಮಂಡಲ್ ಇಂಟರ್ ನ್ಯಾಷನಲ್ ಮಾರಾಟ ಮಳಿಗೆ ಮೇಲೆ ದಾಳಿ

181122 Sriramnagar Coromandel International Outlets
ಶ್ರೀರಾಮನಗರದ ಕೋರಮಂಡಲ್ ಇಂಟರ್ ನ್ಯಾಷನಲ್ ಮಾರಾಟ ಮಳಿಗೆ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಗೊಬ್ಬರ ಚೀಲಗಳನ್ನು ವಶಕ್ಕೆ ಪಡೆದಿದೆ.
Published on

ಗಂಗಾವತಿ: ರೈತರಿಗೆ ತಪ್ಪು ಮಾಹಿತಿ ನೀಡಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಶ್ರೀರಾಮನಗರದ ಕೋರಮಂಡಲ್ ಇಂಟರ್ ನ್ಯಾಷನಲ್ ಮಾರಾಟ ಮಳಿಗೆ ಮೇಲೆ ಕೃಷಿ ಇಲಾಖೆ ಜಾರಿ ದಳದ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿದೆ.

ಸಹಾಯಕ ಕೃಷಿ ನಿರ್ದೇಶಕ ನಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದಾಗ ರಸಗೊಬ್ಬರದ ಮೇಲೆ ಸಮರ್ಪಕ ಮಾಹಿತಿ ಇಲ್ಲದಿರುವುದು ಕಂಡು ಬಂದಿದ್ದು, 1985 ಕಲಂ 19 ಉಲ್ಲಂಘನೆ ಕಾಯ್ದೆಯಡಿ 50 ಕೆಜಿ ತೂಕದ 41 ಗೊಬ್ಬರ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಬಹಳ ದಿನಗಳಿಂದ ಸಮರ್ಪಕ ಮಾಹಿತಿಯಿಲ್ಲದ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮಾರಾಟಗಾರರು ಮತ್ತು ತಮಿಳುನಾಡಿನ ಉತ್ಪಾದಕ ಸಂಸ್ಥೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು.

ತಪ್ಪು ಮಾಹಿತಿ ನೀಡಿರುವ ಬಗ್ಗೆ ಉತ್ಪಾದಕ ಸಂಸ್ಥೆ ಒಪ್ಪಿಕೊಂಡಿದ್ದು ಸಮಜಾಯಿಷಿ ಪತ್ರ ನೀಡಿದ್ದರು. ಇದೇ ಕಾರಣಕ್ಕಾಗಿ ರಸಗೊಬ್ಬರ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ದಾಳಿ ತಂಡದ ಅಧಿಕಾರಿಗಳು ತಿಳಿಸಿದ್ದಾರೆ. ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ಕೆ.ಕುಮಾರಸ್ವಾಮಿ, ಕೃಷಿ ಅಧಿಕಾರಿ ಪಿ.ಅಶೋಕ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net