ಸೂಕ್ತ ಬಂದೋಬಸ್ತ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

25 gvt 03
Published on

ಗಂಗಾವತಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೂಕ್ತ ಬಂದೋಬಸ್ತ್‌ನಲ್ಲಿ ಆಯೋಜಿಸುತ್ತಿದ್ದು, ಅಗತ್ಯ ಸಿಬ್ಬಂದಿ ಈಗಾಗಲೇ ನಿಯೋಜಿಸಲಾಗಿದೆ ಎಂದು ಬಿಇಒ ಸೋಮಶೇಖರಗೌಡ ತಿಪ್ಪನಾಳ್ ಹೇಳಿದರು.

ನಗರದ ತಾಲೂಕು ಆಡಳಿತದ ಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದರು. ಗಂಗಾವತಿ 15, ಕನಕಗಿರಿ 4, ಕಾರಟಗಿ 5 ಸೇರಿ ಅಖಂಡ ಗಂಗಾವತಿ ತಾಲೂಕಿನಲ್ಲಿ 24 ಕೇಂದ್ರ ತರೆಯಲಾಗಿದ್ದು, 8011 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಭೌತಿಕ ಸೌಲಭ್ಯಗಳನ್ನು ಒದಗಿಸಿದ್ದು ಪರೀಕ್ಷೆ ಸುಗಮವಾಗಿ ನಿರ್ವಹಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ತಾಲೂಕು ನೋಡಲ್ ಅಧಿಕಾರಿ ರಾಘವೇಂದ್ರ ಮಾತನಾಡಿ, ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಲು 06 ರೂಟ್ ಅಧಿಕಾರಿಗಳನ್ನು ನೇಮಿಸಿ, ಮಾರ್ಗಗಳನ್ನು ಗುರುತಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಮಂಜುನಾಥ ಭೋಗಾವತಿ ಮಾತನಾಡಿ, ಲೋಪವಾಗದಂತೆ ಪರೀಕ್ಷೆ ಎದುರಿಸಬೇಕಿದ್ದು, ಪೊಲೀಸರ ನೆರವು ಪಡೆಯುವಂತೆ ಸಲಹೆ ನೀಡಿದರು. ನಗರ ಪಿಐ ಅಡಿವೇಶ ಎನ್. ಗುದಿಗೊಪ್ಪ, 24 ಪರೀಕ್ಷಾ ಕೇಂದ್ರಗಳ ಮುಖ್ಯಅಧೀಕ್ಷಕರು ಮತ್ತು ಉಪಅಧೀಕ್ಷಕರು ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net