ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ತೆರೆಯಿರಿ

Gangavathi SFI manavi
ಗಂಗಾವತಿಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಹಾಸ್ಟೆಲ್‌ಗಳನ್ನು ಆರಂಭಿಸುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಮನವಿಯನ್ನು ತಾಲೂಕು ವಿಸ್ತರಣಾಧಿಕಾರಿ ಸುರೇಶ ಅವರಿಗೆ ಸಲ್ಲಿಸಿದರು. ತಾಲೂಕು ಸಮಿತಿ ಅಧ್ಯಕ್ಷ ಗ್ಯಾನೇಶ ಕಡಗದ್, ಪದಾಧಿಕಾರಿಗಳಾದ ಪದಾಧಿಕಾರಿಗಳಾದ ಶರ್ೀ, ಬಾಲಾಜಿ, ಬಸಯ್ಯ, ಶಂಕರ, ದರ್ಶನ್, ಮೌನೇಶ ಇತರರಿದ್ದರು.
Published on

ಗಂಗಾವತಿ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಹಾಸ್ಟೆಲ್‌ಗಳನ್ನು ಆರಂಭಿಸುವಂತೆ ಒತ್ತಾಯಿಸಿ ಎಸ್‌ಎಫ್ಐ ತಾಲೂಕು ಸಮಿತಿ ಸದಸ್ಯರು ನಗರದ ಹಿಂದುಳಿದ ವರ್ಗಗಳ ಇಲಾಖೆ ಮುಂದೆ ಶನಿವಾರ ಪ್ರತಿಭಟಿಸಿದರು.

ವಿವಿಧ ಶಾಲೆ ವಿದ್ಯಾರ್ಥಿಗಳೊಂದಿಗೆ ಪ್ರತಿಭಟಿಸಿದ ನಂತರ ಬೇಡಿಕೆ ಮನವಿಯನ್ನು ತಾಲೂಕು ವಿಸ್ತರಣಾಧಿಕಾರಿ ಸುರೇಶ ಅವರಿಗೆ ಸಲ್ಲಿಸಿದರು.

ತಾಲೂಕು ಸಮಿತಿ ಅಧ್ಯಕ್ಷ ಗ್ಯಾನೇಶ ಕಡಗದ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿನ ಹಿಂದುಳಿದ ವರ್ಗಗಳ ಇಲಾಖೆಯಿಂದ 150 ಹಾಸ್ಟೆಲ್‌ಗಳನ್ನು ಆರಂಭಿಸುವ ಮೂಲಕ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ.

ಕೊಪ್ಪಳ ಜಿಲ್ಲೆಗೆ 10 ಹಾಸ್ಟೆಲ್‌ಗಳನ್ನು ಆರಂಭಿಸುವ ಬಗ್ಗೆ ಸಚಿವ ಶಿವರಾಜ ತಂಗಡಗಿ ಹೇಳಿದ್ದರೂ, ಇದುವರೆಗೂ ಆರಂಭಿಸಿಲ್ಲ. ಶಾಲಾ ಕಾಲೇಜು ಆರಂಭ ಎರಡು ತಿಂಗಳಾದರೂ, ಹಾಸ್ಟೆಲ್ ಕೊರತೆಯಿಂದ ವಿದ್ಯಾರ್ಥಿಗಳು ಓದಲು ಆಸಕ್ತಿವಹಿಸುತ್ತಿಲ್ಲ. ಸರ್ಕಾರದ ವಿಳಂಬ ನೀತಿಯಿಂದ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದ್ದು, ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರದ ೋಷಣೆಯಂತೆ ಗಂಗಾವತಿ, ಕಾರಟಗಿ, ಕನಕಗಿರಿಯಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ತೆರೆಯುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net