ವಿರುಪಾಪುರ ತಾಂಡಾದಲ್ಲಿ ಸಿಲಿಂಡರ್ ಸ್ಫೋಟ

gangavathi cylendar blast
Published on

ಗಂಗಾವತಿ: ನಗರದ ವಿರುಪಾಪುರ ತಾಂಡಾದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯ ವಸ್ತು, ದಾಖಲೆ ಪತ್ರಗಳು ಸುಟ್ಟು ಹೋಗಿವೆ. ತಾಂಡಾದ ನಿವಾಸಿ ಈರಮ್ಮ ಈರಪ್ಪ ಅವರ ಮನೆಯಲ್ಲಿ ಬೆಳಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಸಿಲಿಂಡರ್ ಸ್ಫೋಟಗೊಂಡಿದೆ. ಕುಟುಂಬಸ್ಥರು ಹೊರಗಡೆ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಮನೆಯಲ್ಲಿದ್ದ ಆಹಾರ ಧಾನ್ಯ, ಬಟ್ಟೆ ಮತ್ತು ದಾಖಲೆ ಪತ್ರಗಳು ಸುಟ್ಟಿವೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕೆಆರ್‌ಪಿಪಿ ಜಿಲ್ಲಾಧ್ಯಕ್ಷ ಮನೋಹರ ಗೌಡ ಹೇರೂರು, ನಗರ ಘಟಕದ ಅಧ್ಯಕ್ಷ ವೀರೇಶ ಬಲ್ಕುಂದಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಗಾಲಿ ಜನಾರ್ದನರೆಡ್ಡಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರಕ್ಕೆ ಮನವಿ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net