ದಲಿತ ಮಹಿಳೆ ಕೊಲೆ ಪ್ರಕರಣ ಅಮಾನವೀಯ

Untitled design(3)
ಗಂಗಾವತಿ ತಹಸಿಲ್ ಕಚೇರಿಯ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಎಂ.ಬಸವರಾಜ್, ಸುಂಕಪ್ಪ ಗದಗ, ಹುಸೇನಪ್ಪ, ಮಂಜುನಾಥ, ರಾಜೇಸಾಬ್ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ವಿಠಲಾಪುರದಲ್ಲಿ ಕೊಲೆಯಾದ ದಲಿತ ಮಹಿಳೆಯ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರ ಮತ್ತು ಗ್ರಾಮೀಣ ಭಾಗದ ಸದಸ್ಯರೊಂದಿಗೆ ಪ್ರತಿಭಟಿಸಿದ ನಂತರ ಬೇಡಿಕೆ ಮನವಿಯನ್ನು ಶಿರಸ್ತೇದಾರ ರವಿಕುಮಾರ ನಾಯಕ್ವಾಡಿಗೆ ಸಲ್ಲಿಸಿದರು.

ಸಮಿತಿ ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ದಲಿತ ಮಹಿಳೆ ಕೊಲೆ ಪ್ರಕರಣ ಅಮಾನವೀಯವಾಗಿದೆ. ಜಾತಿನಿಂದನೆ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಜೀವ ಬಲಿಯಾಗಿದೆ. ಇತ್ತೀಚೆಗೆ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುತ್ತಿಲ್ಲ. ಅಸ್ಪಶ್ಯತೆ ದಿನದಿಂದಕ್ಕೆ ಹೆಚ್ಚುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರ ಪರಿಗಣಿಸುತ್ತಿಲ್ಲ. ಕೊಲೆ ಪ್ರಕರಣದ ದುಷ್ಕರ್ಮಿಗಳಿಗೆ ಶಿಕ್ಷೆಯಾಗಬೇಕಿದ್ದು, ನೊಂದ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ಪುನರ್ವಸತಿ ಕಲ್ಪಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣ ನಿಯಂತ್ರಿಸುವಂತೆ ಒತ್ತಾಯಿಸಿದರು.

ಪದಾಧಿಕಾರಿಗಳಾದ ಎಂ.ಬಸವರಾಜ್, ಸುಂಕಪ್ಪ ಗದಗ, ಹುಸೇನಪ್ಪ, ಮಂಜುನಾಥ, ರಾಜೇಸಾಬ್, ಮರಿನಾಗ, ಮದರ್‌ಸಾಬ್, ಶಿವಣ್ಣ, ಬಾಳಪ್ಪ ಹುಲಿಹೈದರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net