ಯುವಕರಿಂದ ದೇಶದ ಪ್ರಗತಿ ಸಾಧ್ಯ: ಶಾಸಕ ಪರಣ್ಣ ಮುನವಳ್ಳಿ ಅಭಿಮತ

230123 Gangavati Young India India Walk campaigner
ಗಂಗಾವತಿಯ ಸಿಬಿಎಸ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ಯಂಗ್ ಇಂಡಿಯಾ ಭಾರತ ನಡಿಗೆ ಅಭಿಯಾನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
Published on

ಗಂಗಾವತಿ: ಯುವ ಸಮುದಾಯಕ್ಕೆ ಪ್ರೇರಕ ಶಕ್ತಿಯಾದ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರ, ಕೌಶಲಾಭಿವೃದ್ಧಿಗೆ ಒತ್ತು ನೀಡಿದ್ದು, ಆತ್ಮನಿರ್ಭರ ಮೂಲಕ ಸ್ವಾವಲಂಬಿಯನ್ನಾಗಿ ಮಾಡುತ್ತಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಸಿಬಿಎಸ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಭಾನುವಾರ ಏರ್ಪಡಿಸಿದ್ದ ಯಂಗ್ ಇಂಡಿಯಾ ಭಾರತ ನಡಿಗೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶದ ಅಭಿವೃದ್ಧಿ ಸದೃಢ ಯುವಕರಿಂದ ಸಾಧ್ಯವಿದ್ದು, ಆತ್ಮವಿಶ್ವಾಸ ಹೆಚ್ಚಿಸುವ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ. ಬಲಿಷ್ಠ ಭಾರತಕ್ಕಾಗಿ ಅಭಿಯಾನದ ಮೂಲಕ ಯುವಕರನ್ನು ಜಾಗೃತಗೊಳಿಸುತ್ತಿದೆ ಎಂದರು. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ಗಿರೇಗೌಡ ಮಾತನಾಡಿದರು. ನಗರಸಭೆ ಸದಸ್ಯ ವಾಸುದೇವ ನವಲಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಶಿವಕುಮಾರ ಅರಿಕೇರಿ, ನಗರ ಮಂಡಲ ಅಧ್ಯಕ್ಷ ಕೆ.ವೆಂಕಟೇಶ, ಗ್ರಾಮೀಣ ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಚನ್ನಪ್ಪ ಮಳಗಿ, ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ವಿವಿಧ ಮೋರ್ಚಾ ಪದಾಧಿಕಾರಿಗಳಾದ ನರಸಿಂಗರಾವ್ ಕುಲ್ಕರ್ಣಿ, ಸಂತೋಷ ಕೆಲೋಜಿ, ಶ್ರೀನಿವಾಸ ಧೂಳಾ, ಅರ್ಜುನ ರಾಯ್ಕರ್, ರವಿಕುಮಾರ, ರೇಖಾ ಟಿ.ರಾಯಭಾಗಿ, ಶ್ರವಣಕುಮಾರ ರಾಯ್ಕರ್, ಹುಲಿಗೆಮ್ಮ ನಾಯಕ, ಹೈದರ್‌ಅಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net