

ಮಂಜುನಾಥ ಎಸ್. ಅಂಗಡಿ ಧಾರವಾಡ
ಹುಬ್ಬಳ್ಳಿಯ ಉಣಕಲ್ನಲ್ಲಿರುವ ಡಾ. ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ಅನ್ನು ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಆಡಳಿತ ಕಾರ್ಯವ್ಯಾಪ್ತಿಗೆ ಹಸ್ತಾಂತರಿಸುವAತೆ ಸರ್ಕಾರ ಇತ್ತೀಚೆಗೆ ಆದೇಶಿಸಿದೆ.
ಉನ್ನತ ಶಿಕ್ಷಣ ಇಲಾಖೆಯು ಫೆಬ್ರವರಿ ೨೮ರಂದು ಆದೇಶ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದಲ್ಲಿದ್ದ ಟ್ರಸ್ಟ್ನ ನಿರ್ವಹಣೆಯನ್ನು ದಕ್ಷಿಣ ಕರ್ನಾಟಕದ ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಇನ್ನಷ್ಟೇ ನಡೆಯಬೇಕಿದೆ.
ಟ್ರಸ್ಟ್ ನಡೆಸುತ್ತಿದ್ದ ಹಿಂದೂಸ್ಥಾನಿ ಸಂಗೀತ ಕೇಂದ್ರದಲ್ಲಿ ಪ್ರಸ್ತುತ ೨೧ ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ. ಆದರೂ ಸಂಸ್ಥೆಯ ನಿರ್ವಹಣೆಗೆ ವಾರ್ಷಿಕ ಸುಮಾರು ೨೧೩.೫೪ ಲಕ್ಷ ರೂಪಾಯಿ ವೆಚ್ಚವಾಗುತ್ತಿತ್ತು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂಬ ಕಾರಣ ನೀಡಲಾಗಿದೆ. ಹಸ್ತಾಂತರ ಪ್ರಕ್ರಿಯೆಗೆ ಸಂಬAಽಸಿ ಕೆಲ ಷರತ್ತುಗಳನ್ನು ವಿಽಸಲಾಗಿದೆ.
ಹುಬ್ಬಳ್ಳಿಯ ಉಣಕಲ್ನಲ್ಲಿರುವ ಡಾ. ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ಅನ್ನು ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಆಡಳಿತ ಕಾರ್ಯವ್ಯಾಪ್ತಿಗೆ ಹಸ್ತಾಂತರಿಸುವ ಕುರಿತು ಸರ್ಕಾರದಿಂದ ಆದೇಶ ಬಂದಿದೆ. ಈ ಸಂಬAಧ ಬೆಳಗಾವಿ ಪ್ರಾದೇಶಿಕ ಆಯುಕ್ತರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಜರುಗಿಸಲಾಗುವುದು.
- ದಿವ್ಯ ಪ್ರಭು, ಜಿಲ್ಲಾಽಕಾರಿ