ಹುಬ್ಬಳ್ಳಿ: ಇಲ್ಲಿಯ ಗಂಗೂಬಾಯಿ ಹಾನಗಲ್ ಗುರುಕುಲದ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿದ ವಿಷಯದ ಬಗ್ಗೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಬುಧವಾರ ಕಾನೂನು ಸಚಿವರನ್ನು ಭೇಟಿ ಮಾಡಿ, ಸಮಾಲೋಚನೆ ಮಾಡಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಶಾಸಕರು ಸದನದ ಗಮನ ಸೆಳೆದಿದ್ದರು.
ಇದೀಗ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಗುರುಕುಲ ಅಭಿವೃದ್ಧಿ ಕುರಿತು ಪ್ರತ್ಯೇಕವಾಗಿ ಚಚಿರ್ಸಿದರು.
ಉನ್ನತ ಶಿಕ್ಷಣ ಸಚಿವ ಸುಧಾಕರ ಅವರೊಂದಿಗೆ ಸಹ ಮತ್ತೊಂದು ಸುತ್ತಿನ ಮಾತುಕತೆ ಶೀಘ್ರ ನಡೆಯಲಿದೆ ಎಂದು ಹೇಳಲಾಗಿದೆ.