2 ಕೆಜಿ ಗಾಂಜಾ ಸಹಿತ ಆರೋಪಿ ಬಂಧನ ಸಿಸಿಬಿ ಪೊಲೀಸರ ಕಾರ್ಯಾಚರಣೆ

mng--5 Aug mohammad aziz
Published on

ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಅಪರಾಧ ಪತ್ತೆ ದಳ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ 50 ಸಾವಿರ ರೂ. ಮೌಲ್ಯದ 2 ಕೆಜಿ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.


ಕೋಡಿಕಲ್ ಜೆ.ಎಂ. ರಸ್ತೆ ಮುಸ್ತಫ ಕಂಪೌಂಡ್ ನಿವಾಸಿ ಮೊಹಮ್ಮದ್ ಅಜೀಝ್ (40) ಬಂಧಿತ ಆರೋಪಿ.


ನಗರದ ಕಂಕನಾಡಿ, ಪಂಪ್ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, 2 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ 1.05 ಲಕ್ಷ ರೂ. ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ.


ಆರೋಪಿಯ ವಿರುದ್ಧ ಈ ಹಿಂದೆ 2022 ನೇ ಇಸವಿಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net