

ಕುಶಾಲನಗರ:
ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನÀ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಶನಿವಾರ (ಮಾ.15) ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಹೇರೂರು ಗ್ರಾಮದ ನಿವಾಸಿ ಪ್ರಶಾಂತ್ (29) ಎಂಬಾತನನ್ನು ನಿಷೇಧಿತ ಮಾದಕ ವಸ್ತು 1 ಕೆ.ಜಿ. 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಸ್‌ಪಿ ಕೆ. ರಾಮರಾಜನ್ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ಟೌನ್ ಪಿಐ ಬಿ.ಜಿ. ಪ್ರಕಾಶ್, ಪಿಎಸ್‌ಐ ಗೀತಾ, ಸಿಬ್ಬಂದಿ ಹಾಗೂ ಡಿಸಿಆರ್‌ಬಿ ಸಿಬ್ಬಂದಿ ವಿಶೇಷ ತಂಡ ಕಾರ್ಯಾಚರಿಸಿ ಶೈಲಜಾ ಬಡವಾಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿರುವ ಪ್ರಕರಣ ಪತ್ತೆ ಹಚ್ಚಿದ್ದಾರೆ.
ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಕೊಡಗನ್ನು ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಮುಕ್ತ ಜಿಲ್ಲೆಯಾನ್ನಾಗಿಸಲು ಸಹಕರಿಸುವ ನಿಟ್ಟಿನಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ, ಸರಬರಾಜು, ಮಾರಾಟ ಮಾಡುವ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.