ಗಾಂಜಾ ಮತ್ತಲ್ಲಿ ಕಂಡಕಂಡವರ ಮೇಲೆ ಹಲ್ಲೆ ಮಾಡಿತು ಕಿಡಿಗೇಡಿಗಳ ಗುಂಪು; ಇಬ್ಬರಿಗೆ ಗಾಯ, ಮಧ್ಯಪ್ರವೇಶಿಸಿದವರ ಮೇಲೂ ಹಲ್ಲೆ..

Ganja
ಹಲ್ಲೆಯಿಂದ ಗಾಯಗೊಂಡ ಯುವಕ ಹಾಗೂ ಪ್ರತಿಭಟನಾನಿರತ ಸಾರ್ವಜನಿಕರು
Published on

ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಕಿಡಿಗೇಡಿ ಯುವಕರ ಗುಂಪೊಂದು ಕಂಡಕಂಡವರ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಭದ್ರಾವತಿಯ ಹೊಸ ಸಿದ್ಧಾಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.

ಗಾಂಜಾ ಸೇವಿಸಿದ್ದ ಎಂಟು ಜನ ಯುವಕರ ಗುಂಪು ಕಂಡಕಂಡವರ ಮೇಲೆ ಹಲ್ಲೆ ನಡೆಸಿದ್ದು, ಹಳೇ ನಂಜಾಪುರದ ವಿನೋದ್ ಮತ್ತು ರಾಜೇಶ್ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಗಲಾಟೆ ಬಿಡಿಸಲು ಹೋದ ನಗರಸಭೆ ಸದಸ್ಯನ ಮಾವನ ಮೇಲೆ ಕೂಡ ಹಲ್ಲೆ ನಡೆದಿದೆ. ಗಾಯಾಳುಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿಡಿಗೇಡಿಗಳ ಈ ಕೃತ್ಯವನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಗಾಂಜಾ ಹಾವಳಿ ಹೆಚ್ಚಾಗುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಹಲ್ಲೆಕೋರರನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ನ್ಯೂಟೌನ್​ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡಿದ ಬಳಿಕ ಜನರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net