ಗಾಂಜಾ ಸೇದುತ್ತಿದ್ದ ಇಬ್ಬರ ಬಂಧನ

Crime
Published on

ಕಲಬುರಗಿ: ಉಸ್ಮಾನಿಯಾ ಕಾಲನಿಯಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಣಪ್ಪ ಕೋರೆ ಮತ್ತು ಸೂರ್ಯಕಾಂತ ಮೇಲಿನಕೇರಿ ಬಂಧಿತರು. ಕಾಲನಿಯ ಬ್ಯಾಂಕ್ವೆಟ್ ಹಾಲ್ ಹಿಂಭಾಗದಲ್ಲಿ ಗಾಂಜಾ ಸೇವಿಸುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಮಾಡಿಸಿದರು. ಎಂಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜುಕೋರರ ಬಂಧನ: ಸಂಗಮೇಶ್ವರ ಕಾಲನಿ ಶಿವ ಮಂದಿರ ಬಳಿ ಜೂಜಾಡುತ್ತಿದ್ದ ನಾಲ್ವರನ್ನು ರಾಘವೇಂದ್ರ ನಗರ ಠಾಣೆ ಪೊಲೀಸರು ಬಂಧಿಸಿ ಪಣಕ್ಕಿಟ್ಟಿದ್ದ ೩೩,೫೨೦ ರೂ. ಜಪ್ತಿ ಮಾಡಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ಶಿವಾನಂದ ಗಾಣಿಗೇರ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net