ಗಾಂಜಾ ಸಾಗಾಟ ಅಪರಾಧಿಗೆ ಜೈಲು

finally justice
Published on

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 4.830 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಅಡಿಷನಲ್ ಡಿಸ್ಟ್ರಿಕ್ಟ್ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ.ಪ್ರಿಯಾ ಅವರು ಪ್ರಕರಣದ ಎರಡನೇ ಅಪರಾಧಿ ಪಟ್ಲ ನಿವಾಸಿ ಅಬ್ದುಲ್ ರಾವುಫ್ ಎಂಬಾತನಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆತ ಮೂರು ತಿಂಗಳು ಹೆಚ್ಚಿನ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಪ್ರಕರಣದ ಒಂದನೇ ಅಪರಾಧಿಗೆ ಈ ಹಿಂದೆ ಶಿಕ್ಷೆ ವಿಧಿಸಲಾಗಿದೆ. 2015ರ ನ.29ರಂದು ತಡರಾತ್ರಿ ಸೀತಾಂಗೋಳಿಯಲ್ಲಿ ಬದಿಯಡ್ಕ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶಪಡಿಸಿ, ಆರೋಪಿಗಳನ್ನು ಬಂಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net