

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣದ ಆರೋಪಿ ಕಣ್ಣೂರು ಧರ್ಮಡಂ ನಿವಾಸಿ ಎನ್.ಕೆ.ಸಲ್ಮಾನ್ ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ.ಪ್ರಿಯಾ ಮೂರು ವರ್ಷ ಕಠಿಣ ಜೈಲು ಶಿಕ್ಷೆ, 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2020ರ ಜೂನ್ 2ರಂದು ಕುಂಬಳೆ-ಸೀತಾಂಗೋಳಿ ರಸ್ತೆಯ ಪೆಟ್ರೋಲ್ ಪಂಪ್ ಸನಿಹ ಕಾರಿನಲ್ಲಿ ಸಾಗಿಸುತ್ತಿದ್ದ ಆರು ಕಿ.ಗ್ರಾಂ. ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸಲ್ಮಾನ್ ಪ್ರಕರಣದ ಎರಡನೇ ಆರೋಪಿಯಾಗಿದ್ದು, ಪ್ರಕರಣದ ಮೊದಲ ಆರೋಪಿ ಕಣ್ಣೂರು ನಿವಾಸಿ ಕೆ.ವಿ.ಆರ್ಶಾದ್ ಎಂಬಾತನಿಗೆ ಈ ಹಿಂದೆ ಮೂರು ವರ್ಷಗಳ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಲಾಗಿತ್ತು.