ಗಾಂಜಾ ಬೆಳೆದಿದ್ದ ಆರೋಪಿ ಬಂಧನ

17 smg 26
Published on

ಶಿವಮೊಗ್ಗ: ತಾಲೂಕಿನ ಅಗಸವಳ್ಳಿ ಗ್ರಾಪಂ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಅಡಕೆ ಮತ್ತು ಬಾಳೆ ಮಿಶ್ರಿತ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿರುವ ಅಬಕಾರಿ ಪೊಲೀಸರು, 24 ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.

ಹೊಸೂರು ಗ್ರಾಮದ ಮುನಿರಂಗೇಗೌಡ ಅಲಿಯಾಸ್ ಕಿರಣ್ ಬಂಧಿತ ಆರೋಪಿ. ಈತ ಹೊಸೂರು ಗ್ರಾಮದ ಸರ್ವೇ ನಂಬರ್ 167ರಲ್ಲಿ ಅಡಕೆ-ಬಾಳೆ ತೋಟದಲ್ಲಿ ಮಾರಾಟ ಮಾಡುವ ಉದ್ದೇಶದಿಂದ 24 ಗಾಂಜಾ ಗಿಡ ಬೆಳೆದಿದ್ದ.

ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್‌ಕುಮಾರ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಜಿ.ಬಿ.ಮಂಜುನಾಥ, ಎನ್.ಹಾಲಾನಾಯ್ಕ ಮತ್ತು ತುಂಗಾನಗರ ಠಾಣೆ ಇನ್‌ಸ್ಪೆಕ್ಟರ್ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net