ಗಾಂಜಾ ಮಾರುತ್ತಿದ್ದವನ ಬಂಧನ

ganja
Published on

ಹುಬ್ಬಳ್ಳಿ: ಖಚಿತ ಮಾಹಿತಿ ಮೇರೆಗೆ ನಗರದ ಹುಬ್ಬಳ್ಳಿ-ಗದಗ ರಸ್ತೆಯ ಚೆಲ್ಲಿ ಗ್ರೌಂಡ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಕೇಶ್ವಾಪುರ ರಾಮನಗರದ ಬಾಜಿಲ್ ಅಂಥೋನಿ (26) ಬಂಧಿತ. ಈತನಿಂದ 74,250 ರೂ. ಮೌಲ್ಯದ 270 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಸಿಇಎನ್ ಕ್ರೈಂ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net