

ಉಳ್ಳಾಲ: ಸ್ಮಶಾನದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಬಗಂಬಿಲ ಶಾಂತಿಭಾಗ್ ನಿವಾಸಿ ಆರೋಪಿ ಮಹಮ್ಮದ್ ಶರೀಫ್ ಪೈಝಲ್ ಬಂಧಿತ ಆರೋಪಿ. ಈತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಮತ್ತು ಮಾರಾಟಕ್ಕೆ ಬಳಸಿದ್ದ ಆಟೋ ರಿಕ್ಷಾ, ಎರಡು ಮೊಬೈಲ್ ಸಹಿತ ಒಟ್ಟು 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ಸ್‌ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಉಪ ನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿ ಅಶೋಕ್, ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.