

ಶಿವಮೊಗ್ಗ: ನಗರದ ಹೊರವಲಯದ ಅನುಪಿನಕಟ್ಟೆ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ 75 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಡಿಕೊಪ್ಪದ ಮೋಹನ್ (29) ಮತ್ತು ಗೋಪಾಳದ ಮಿಥುನ್ (19) ಬಂಧಿತರು. ಖಚಿತ ಮಾಹಿತಿ ಮೇರೆಗೆ ಸಿಇಎನ್ ಠಾಣೆ ಇನ್‌ಸ್ಟೆಕ್ಟರ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 715 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.