ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

IMG-20240502-WA0149
Published on

ಅರಸೀಕೆರೆ ಗ್ರಾಮಾಂತರ : ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆಪುರ ಪುರಾಣ ಪ್ರಸಿದ್ಧ ಗ್ರಾಮದ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಬ್ರಹ್ಮರಥೋತ್ಸವವು ಗುರುವಾರ ಅತ್ಯಂತ ವೈಭವವಾಗಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ತಾಲೂಕಿನ ಬಾಣಾವರ ಹೋಬಳಿಯ ಗಂಜಿಗೆರೆಪುರ ಗ್ರಾಮದ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ಬೆಳಗ್ಗೆ ಪಂಚಾಮೃತ ಅಭಿಷೇಕ, ಗಂಗಾಸ್ನಾನ, ಬಲಿಪ್ರದಾನೋತ್ಸವ, ಸಂಪ್ರೋಕ್ಷಣೆ, ರಕ್ಷಾಬಂಧನ, ಪುಷ್ಪ ಮಂಟಪೋತ್ಸವ, ಸರ್ಪೋತ್ಸವ, ನವಿಲೋತ್ಸವ, ಗಜೇಂದ್ರ ಮೋಕ್ಷ, ಗರುಡೋತ್ಸವ, ಲಕ್ಷ್ಮೀಕಲ್ಯಾಣೋತ್ಸವ, ಅಂಬಾರಿ ಉತ್ಸವಾದಿಗಳು ಸೇರಿದಂತೆ ಅನೇಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ನಂತರ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿದ ನಂತರ ನೆರದಿದ್ದ ಭಕ್ತರು ಗೋವಿಂದನ ನಾಮ ಸ್ಮರಣೆ ಮಾಡುತ್ತಾ ರಥವನ್ನು ಎಳೆದರು. ಈ ಸಂದರ್ಭದಲ್ಲಿ ರಥಕ್ಕೆ ಹಣ್ಣು, ಧವನ ಎಸೆಯುವ ಮೂಲಕ ಭಕ್ತರು ಹರಕೆ ತೀರಿಸಿದರು.
ಜಾತ್ರೆ ಅಂಗವಾಗಿ ಭಕ್ತರಿಗೆ ವಸಂತ ಸೇವೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net