ಕಾಯಂ ಶಿಕ್ಷಕರ ನೇಮಕಕ್ಕೆ ಗಂಟಿಹೊಳೆ ಆಗ್ರಹ

Gururaj
Published on

ಬೈಂದೂರು: ಶಿಕ್ಷಕರ ಕೊರತೆಯನ್ನು ನೀಗಿಸಲು 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸುವ ಬಗ್ಗೆ ಶಿಕ್ಷಣ ಇಲಾಖೆ ತಿಳಿಸಿದೆ. ಇಷ್ಟೊಂದು ಶಿಕ್ಷಕರ ಹುದ್ದೆ ಖಾಲಿ ಇರುವಾಗ ಆ ಎಲ್ಲ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡುವುದರಿಂದ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಉತ್ತಮ ಫಲಿತಾಂಶ ನಿರೀಕ್ಷಿಸಲು ಸಾಧ್ಯವೇ ಎಂದು ಶಾಸಕ ಗುರುರಾಜ ಗಂಟಿಹೊಳೆ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಾರೆ.

ಕಾಯಂ ಶಿಕ್ಷಕರ ಭರ್ತಿಗೆ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇಷ್ಟೊಂದು ಅಗಾಧ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿ ಮುಂದೆ ಕಾಯಂ ಶಿಕ್ಷಕರ ನೇಮಕಾತಿಯಾದಲ್ಲಿ ಅತಿಥಿ ಶಿಕ್ಷಕರೇನು ಮಾಡಬೇಕು. ಈ ಬಗ್ಗೆಯೂ ಸರ್ಕಾರ ಯೋಚಿಸಬೇಕಿದೆ. ಕಾಯಂ ಶಿಕ್ಷಕರ ನೇಮಕಕ್ಕೆ ಸರ್ಕಾರ ಮುಂದಾಗಬೇಕು ಎಂದು ಶಾಸಕ ಗಂಟಿಹೊಳೆ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net