

ಮೈಸೂರು: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನೇ ಅಧಿಕಾರಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಜಿಲ್ಲೆಯಾದ್ಯಾಂತ ‘ಗಾಂವ್ ಚಲೋ ಅಭಿಯಾನ’ ನಡೆಸಲಾಗುತ್ತಿದೆ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದರು.
ಇಂದಿನಿಂದಲೇ (ಫೆ.4ರಿಂದ) ಈ ಅಭಿಯಾನ ಪ್ರಾರಂಭಿಸಲಾಗಿದೆ. ಒಂದು ಬೂತ್‌ನಿಂದ ಮತ್ತೊಂದು ಬೂತ್‌ನ ಪೇಜ್ ಪ್ರಮುಖರನ್ನು ಭೆೇಟಿ ಮಾಡಿ ಹೊಸ ಮತದಾರರ ಸೇರ್ಪಡೆ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಸರಳ, ನಮೋ ಆ್ಯಪ್‌ಗಳನ್ನು ಮೊಬೈಲ್‌ಗಳಲ್ಲಿ ಡೌನ್‌ಲೋಡ್ ಮಾಡಿಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಸಾಧನೆಗಳು, ದೇಶದ ಅಭಿವೃದ್ಧಿಗೆ ಮೋದಿ ಕೈಗೊಂಡ ಕ್ರಮಗಳು, ಜಾರಿಗೊಳಿಸಿರುವ ಯೋಜನೆಗಳ ಮಾಹಿತಿಯನ್ನು ಜನರಿಗೆ ನೀಡಲಾಗುವುದು. ಜನಸಂಘದಲ್ಲಿ ಕಾರ್ಯನಿರ್ವಹಿಸಿರುವವರು, ಸ್ಥಳೀಯ ಮುಖಂಡರು, ಹಾಲಿನ ವಿತರಕರು, ಅಂಚೆ ವಿತರಕರು ಸೇರಿದಂತೆ ಮುಂತಾದವರನ್ನು ಭೆೇಟಿ ಮಾಡಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಸ್ವಚ್ಛ ಭಾರತ ಅಭಿಯಾನದಡಿ ಮಂಡಲಗಳ ಬೂತ್‌ಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುವುದು ಎಂದು ಹೇಳಿದರು.