ಗರಗ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ

WhatsApp Image 2023-08-02 at 2.20.07 PM
Published on

ಧಾರವಾಡ: ತಾಲೂಕಿನ ಗರಗ ಗ್ರಾಮ ಪಂಚಾಯಿತಿಯ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬುಧವಾರ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆಯಿತು. 27 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ’ಅ’ ವರ್ಗ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ರೇಖಾ ಜಗದೀಶ ದಳವಾಯಿ ಮತ್ತು ಬ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶಿವಾನಂದ ನಿಂಗಪ್ಪ ಉಳವಣ್ಣವರ ಆಯ್ಕೆಯಾದರು.
ಎರಡೂ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿ ಎಸ್.ಎನ್. ಗೌಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net