ಪೆರಿಯಶಾಂತಿಯಲ್ಲಿ ಕಸ ತೆರವು

kasa
ಪೆರಿಯಶಾಂತಿ ಪರಿಸರದಲ್ಲಿ ತ್ಯಾಜ್ಯ ಸಂಗ್ರಹಣಾ ಕಾರ್ಯಾಚರಣೆ ನಡೆಯಿತು.
Published on

ನೆಲ್ಯಾಡಿ: ಧರ್ಮಸ್ಥಳ-ಸುಬ್ರಹ್ಮಣ್ಯ ಸಂಪರ್ಕ ರಸ್ತೆಯಲ್ಲಿನ ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ರಸ್ತೆ ಬದಿಯಲ್ಲಿ ಎಸೆಯಲ್ಪಟ್ಟ ತ್ಯಾಜ್ಯಗಳಿಂದ ಉಂಟಾಗುತ್ತಿರುವ ಸಮಸ್ಯೆಯ ಬಗ್ಗೆ ವಿಜಯವಾಣಿ ವರದಿ ಪ್ರಕಟಿಸಿದ ಬೆನ್ನಿಗೆ ಎಚ್ಚೆತ್ತ ಕೌಕ್ರಾಡಿ ಗ್ರಾಮ ಪಂಚಾಯಿತಿ ಆಡಳಿತ ಬುಧವಾರ ತ್ಯಾಜ್ಯ ತೆರವುಗೊಳಿಸಿತು.

ಪೆರಿಯಶಾಂತಿ ಪರಿಸರದಲ್ಲಿ ರಸ್ತೆಯ ಉದ್ದಗಲಕ್ಕೂ ತ್ಯಾಜ್ಯ ಎಸೆಯುತ್ತಿರುವುದರಿಂದ ಕ್ರಿಮಿ-ಕೀಟಗಳು ಉತ್ಪತ್ತಿಯಾಗಿ ಅನಾರೋಗ್ಯಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ವಿಜಯವಾಣಿ ಪತ್ರಿಕೆ ವಿಸ್ತೃತ ವರದಿ ಪ್ರಕಟಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net