

ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆನಗರ ಬ್ಯಾಹಟ್ಟಿ ಪ್ಲಾಟ್ ಹತ್ತಿರದ ಈ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಕಸ ಚೆಲ್ಲಲಾಗುತ್ತಿದೆ.
ಇದರಿಂದ ಎಲ್ಲೆಡೆ ಗಬ್ಬು ವಾಸನೆ ಬೀರುತ್ತಿದೆ. ಮಳೆಗಾಲದಲ್ಲಿ ರೋಗ ರುಜಿನಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ಇಲ್ಲಿನ ವಾತಾವರಣ ಜನರಲ್ಲಿ ಭೀತಿ ಮೂಡಿಸಿದೆ.
ಮಹಾನಗರ ಪಾಲಿಕೆ ಅಧಿಕಾರಿಗಳು ಇನ್ನಾದರೂ ಗಮನಿಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಸಾರ್ವಜನಿಕರು ಕೋರಿದ್ದಾರೆ.