ಗೋಲ್ಡನ್ ಟೆಂಪಲ್ ಮುಖ್ಯ ರಸ್ತೆಯಲ್ಲಿ ಕಸದ ರಾಶಿ

IMG-20240903-WA0067
Published on

ಬೈಲಕುಪ್ಪೆ: ಗೋಲ್ಡನ್ ಟೆಂಪಲ್ ಮುಖ್ಯ ರಸ್ತೆ ಪಕ್ಕದಲ್ಲಿ ಬಿದ್ದಿರುವ ಕಸದ ರಾಶಿ ಕೊಳೆತು ನಾರುತ್ತಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಮೂಗು ಮುಚ್ಚಿಕೊಂಡು ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತೆರವುಗೊಳಿಸಬೇಕೆಂದು ಸ್ಥಳೀಯ ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿ ನೋಡುಗರ ತಾಣವಾದ ಗೋಲ್ಡನ್ ಟೆಂಪಲ್ ಹೋಗುವ ಮುಖ್ಯರಸ್ತೆಯ ಪಕ್ಕದಲ್ಲಿ ಕಸದ ರಾಶಿ ಬಿದ್ದಿದೆ. ಸ್ಥಳೀಯರು ಈ ಬಗ್ಗೆ ಕೊಪ್ಪ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಏನು ಪ್ರಯೋಜನವಾಗುತ್ತಿಲ್ಲ ಎಂದು ದೂರಿದ್ದಾರೆ.


ಇದೇ ರಸ್ತೆ ಮಾರ್ಗವಾಗಿ ದೊಡ್ಡ ಹರವೆ, ಲಮಾ ಕ್ಯಾಂಪ್‌ಗೆ ದಿನ ನಿತ್ಯ ಸಾರ್ವಜನಿಕರು ಓಡಾಡುತ್ತಾರೆ. ಶಾಲಾ-ಕಾಲೇಜಿಗೆ ಮಕ್ಕಳಿಗೂ ತೊಂದರೆಯಾಗಿದ್ದು, ಇಲ್ಲಿ ಎಸೆದ ಕಸ ಚರಂಡಿ ನೀರಿನ ಮೂಲಕ ಕಾವೇರಿ ನದಿಗೆ ಸೇರುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net