ಪೊಂಗಲ್ ಹಬ್ಬದ ಅಂಗವಾಗಿ ಕಳಸ ಮೆರವಣಿಗೆ

16sunti02
Published on

ಸುಂಟಿಕೊಪ್ಪ: ತಮಿಳು ಸಂಘದ ವತಿಯಿಂದ ಪೊಂಗಲ್( ಮಕರ ಸಂಕ್ರಾಂತಿ) ಹಬ್ಬದ ಆಚರಣೆಯ ಅಂಗವಾಗಿ ಕಳಸ ಮೆರವಣಿಗೆ ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯಿತು.

ಸೋಮವಾರ ಬೆಳಗ್ಗೆ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಮಹಾಗಣಪತಿ ದೇವಾಲಯದಿಂದ ನೂರಾರು ಮಹಿಳೆಯರು, ಪುರುಷರು ಸೇರಿದಂತೆ ಮಕ್ಕಳು ಪೂಜೆ ನೆರವೇರಿಸಿ ಕೊಪ್ಪದ ನಾದಸ್ಚರದ ಮುಂದಾಳತ್ವದಲ್ಲಿ ಗಣಪತಿ ದೇವಾಲಯದಿಂದ ಹಾಲಿನ ಕಳಸ ಹೊತ್ತು ಮೆರವಣಿಗೆ ಮೂಲಕ ಮುಖ್ಯಬೀದಿಯಲ್ಲಿ ಅಯ್ಯಪ್ಪ ದೇವಾಲಯದವರೆಗೆ ಸಾಗಿ ಅಲ್ಲಿಂದ ಚಾಮುಂಡೇಶ್ವರಿ ದೇವಾಲಯದಲ್ಲಿ ಸಮಾಪ್ತಿಗೊಂಡಿತು.

ಬೆಳಗ್ಗೆ ಕಳಸಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ವೃಕ್ಷೋದ್ಭವ ದೇವಾಲಯದ ಟ್ರಸ್ಟಿ ಎ.ಲೋಕೇಶ್‌ಕುಮಾರ್ ಅವರು ಶಿರಕ್ಕೆ ಕಳಸ ಇರಿಸುವ ಮೂಲಕ ಚಾಲನೆ ನೀಡಿದರು.

ನಂತರ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಅಲ್ಲಿ ದೇವಿಗೆ ಅಭಿಷೇಕ ಮಾಡಿ ನಂತರ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ನೆರೆದಿದ್ದ ಭಕ್ತ ಸಮೂಹಕ್ಕೆ ಸಮಿತಿ ವತಿಯಿಂದ ಪೊಂಗಲ್ ಮತ್ತು ಅನ್ನ ಸಂತರ್ಪಣೆ ನೆರವೇರಿಸಲಾಯಿತು.

ತಮಿಳು ಸಮಿತಿ ಅಧ್ಯಕ್ಷ ಅಯ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಮಂಜುನಾಥ್, ವಾಹನ ಚಾಲಕರ ಸಂಘದ ಅಧ್ಯಕ್ಷ ಸುರೇಶ, ದೊರೈ, ವಿಘ್ನೇಶ್, ಅರುಣಾ, ಸೂರ್ಯ, ಕುಶಾಲನಗರ ಪೊಂಗಲ್ ಸಮಿತಿ ಅಧ್ಯಕ್ಷ ಪಳನಿಸ್ವಾಮಿ, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net