ಕಸ ಸಂಗ್ರಹ ವಾಹನ ಚಾಲಕನ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಪ್ರತಿಭಟನೆ

CTD 9 STRIKE 2
Published on

ಚಿತ್ರದುರ್ಗ: ನಗರಸಭೆ ವಾಹನ ಚಾಲಕನ ಮೇಲೆ ನಗರದ ನಿವಾಸಿಯೊಬ್ಬರು ಹಲ್ಲೆ ನಡೆಸಿದ್ದು, ಆತನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪೌರಕಾರ್ಮಿಕರು ಭಾನುವಾರ ಬೆಳಗ್ಗೆ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ವಾರ್ಡ್ ನಂ.34 ಜಟ್‌ಪಟ್ ನಗರದಲ್ಲಿ ಶನಿವಾರ ಮಧ್ಯಾಹ್ನ ಕಸ ಸಂಗ್ರಹ ವಾಹನ ತೆರಳುತ್ತಿದ್ದ ವೇಳೆ ಮನೆ ಮಾಲೀಕರೊಬ್ಬರು ರಸ್ತೆ ಮಧ್ಯದಲ್ಲಿ ಕ್ರೂಸರ್ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದರು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಈ ಕುರಿತು ತಿಳಿಹೇಳಿ, ರಸ್ತೆ ಬದಿಗೆ ವಾಹನ ನಿಲ್ಲಿಸುವಂತೆ ಹೇಳಿದ ಕಸ ಸಂಗ್ರಹದ ವಾಹನ ಚಾಲಕ ತಿಪ್ಪೇಸಾಮಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪ್ರತಿಭನಾನಿರತರು ದೂರಿದರು.

ಕೂಡಲೇ ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಬೇಕು. ಪದೇ ಪದೆ ಈ ರೀತಿ ಕೆಲ ಬಡಾವಣೆಗಳಲ್ಲಿ ದೌರ್ಜನ್ಯ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ, ಆಡಳಿತ ವರ್ಗ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಘಟನೆ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net