ಕಾಯಕ ತತ್ವ ಪ್ರತಿಪಾದಿಸಿದ ಜಗಜ್ಯೋತಿ ಬಸವಣ್ಣ - ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ

Garlanding of Basaveshwara idol by DC
ವಿಜಯಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಮಾಲಾರ್ಪಣೆ ಮಾಡಿದರು. ಸಿಇಒ ರಾಹುಲ್ ಸಿಂಧೆ, ಎಸ್‌ಪಿ ಎಚ್.ಡಿ. ಆನಂದಕುಮಾರ್ ಇತರರಿದ್ದರು.
Published on

ವಿಜಯಪುರ: ಕಾಯಕ ತತ್ವ ಪ್ರತಿಪಾದಿಸಿದ ಜಗಜ್ಯೋತಿ ಬಸವೇಶ್ವರರು ಮಹಾ ಮಾನವತಾವಾದಿ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅರ್ಥಪೂರ್ಣ ಹಾಗೂ ಸರಳವಾಗಿ ಆಯೋಜಿಸಿದ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಮಾನತೆ ಸಾರಿದರು. ಕಾಯಕವೇ ಕೈಲಾಸ ಎಂಬ ತತ್ವದಡಿ ಕಾಯಕದ ಮಹತ್ವ ತಿಳಿಸಿದರು. ಎಲ್ಲ ಶರಣರನ್ನು ಅನುಭವ ಮಂಟಪ ಎಂಬ ವೇದಿಕೆಗೆ ತಂದು, ಅಭಿವ್ಯಕ್ತಿ ಸ್ವಾತಂತ್ರದ ಚರ್ಚಾ ವೇದಿಕೆಯಾಗಿಯನ್ನಾಗಿಸಿದರು. ಸಮಾನತೆ ಸಾರಿದ ಬಸವಣ್ಣನವರ ಆದರ್ಶ-ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.

ಇದಕ್ಕೂ ಮೊದಲು ವಿಜಯಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ದಾನಮ್ಮನವರ್ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ್ ಕುಮಾರ ಮಾಲಾರ್ಪಣೆ ನೆರವೇರಿಸಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net