ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆಗೆ ಬೆಂಕಿ

gas cylinder blast
ಸಾಂದರ್ಭಿಕ ಚಿತ್ರ
Published on

ಉಡುಪಿ: ಮಣಿಪಾಲದ ಅನಂತನಗರದ ಮನೆಯೊಂದರಲ್ಲಿ ಬುಧವಾರ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಅಡುಗೆ ಅನಿಲ ಸಿಲಿಂಡರ್ ಬದಲಿಸುವ ಸಂದರ್ಭದಲ್ಲಿ ಅನಿಲ ಸೋರಿಕೆಯಾಗಿದ್ದು, ಮನೆಯವರು ಒದ್ದೆ ಬಟ್ಟೆಗಳನ್ನಿರಿಸಿ ನಿಯಂತ್ರಿಸಲು ಪ್ರಯತ್ನಿಸಿದರೂ ಸಫಲವಾಗದೆ ಬೆಂಕಿ ಹೊತ್ತಿಕೊಂಡಿತ್ತು. ಅಪಾಯ ಅರಿತ ಮನೆ ಮಂದಿ ಹೊರಗೆ ಧಾವಿಸಿ ಪ್ರಾಣ ಉಳಿಸಿಕೊಂಡಿದ್ದಾರೆ. ಅನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net