ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಒಬ್ಬರ ಸಾವು, ಮೂವರ ಸ್ಥಿತಿ ಗಂಭೀರ..

Gas
Published on

ಬೀದರ್: ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ರಾಸಾಯನಿಕ ಸೋರಿಕೆ ಉಂಟಾಗಿ ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಲ್ಲದೆ, ಅಸ್ವಸ್ಥಗೊಂಡಿರುವ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಬೀದರ್​ನ ಹುಮ್ನಾಬಾದ್​ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.

ಇಲ್ಲಿನ ಸ್ಪುಟ್ನಿಕ್​ ಲ್ಯಾಬ್ಸ್​ ಎಂಬ ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಗುರುಪ್ರಸಾದ ಶಶಿಕಾಂತ ಹಳಿಜೊಳೆ (40) ಸಾವಿಗೀಡಾಗಿದ್ದಾರೆ. ಸೌರಭ ದಯಾನಂದ (19) ಮಧ್ಯಪ್ರದೇಶದ ವಿಷ್ಣುದೇವಿ ಪ್ರಸಾದ (25) ಹಾಗೂ ಗಿರೀಶ್ ರೆಡ್ಡಿ ಎಂಬವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಹೈಡ್ರೋಜನ್ ಸಲ್ಫೇಟ್ ವಿಷಾನಿಲ ಸೋರಿಕೆಯಾದ ಪರಿಣಾಮ ನಾಲ್ವರು ಕಾರ್ಮಿಕರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದರು. ಆ ಪೈಕಿ ಒಬ್ಬರು ಸಾವಿಗೀಡಾಗಿದ್ದರೆ, ಇನ್ನು ಮೂವರ ಪರಿಸ್ಥಿತಿ ಗಂಭೀರವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net