

ಹೂವಿನಹಡಗಲಿ: ಪಟ್ಟಣದ ಈಶ್ವರಿ ಹೋಟೆಲ್‌ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸುತ್ತಲಿನ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಗೃಹ ಬಳಕೆ ಸಿಲಿಂಡರ್‌ನ ರೆಗ್ಯುಲೇಟರ್‌ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಹೋಟೆಲ್‌ನಲ್ಲಿದ್ದವರು ಕೂಡಲೇ ಹೊರಗೆ ಓಡಿ ಬಂದು ಅಪಾಯದಿಂದ ಪಾರಾದರು. ಸುತ್ತಲಿನ ವ್ಯಾಪಾರಸ್ಥರು ಗಾಬರಿಗೊಂಡು ಅಂಗಡಿಗಳ ಬಾಗಿಲುಗಳನ್ನು ಮುಚ್ಚಿದ್ದರು. ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿ ಭಾರಿ ಅನಾಹುತ ತಪ್ಪಿಸಿದರು.