ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ, ತಪ್ಪಿದ ಭಾರಿ ದುರಂತ

accident
Published on

ಮಂಗಳೂರು: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯ ಹೊಸಮಜಲುನಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಟ್ಯಾಂಕರ್ ಹೋಗುತ್ತಿತ್ತು. ಕೋಲಾರದಿಂದ ಮಂಗಳೂರು ಕಡೆಗೆ ಡೀಸೆಲ್ ಟ್ಯಾಂಕರ್ ಬರುತ್ತಿತ್ತು. ಮಾರ್ಗಮಧ್ಯೆ ಈ ಎರಡೂ ವಾಹನ ಅಪಘಾತಕ್ಕೀಡಾಗಿವೆ.

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತದ ಸುದ್ದಿ ಕೇಳಿದ ಸ್ಥಳೀಯರು ಬೆಚ್ಚಿಬಿದ್ದಿದ್ದರು. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ ಎಂಬುದು ಅರಿವಾಗಿ ನಿಟ್ಟುಸಿರು ಬಿಟ್ಟರು. ಚಾಲಕರಿಬ್ಬರಿಗೂ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಉಪ್ಪಿನಂಗಡಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net