ಕೆ.ಜಿ.ರಮ್ಯಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ

K.G.ramya
Published on

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಕೆ.ಜಿ.ರಮ್ಯ ಮೂರ್ನಾಡುರವರು ರಚಿಸಿದ ದಾಹಗಳ ಮೈ ಸವರುತ್ತಾ ಕವನ ಸಂಕಲನಕ್ಕೆ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ.ವಸಂತರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ ೧೯ ಲೇಖಕಿಯರಿಗೆ ಪ್ರಶಸ್ತಿ ನೀಡಲಾಗಿದೆ. ೨೦೨೩-೨೪ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು ೯ ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರು ಪುಸ್ತಕಗಳನ್ನು ಪರಮಾರ್ಶಿಸಿ ಸಂದರ್ಭ ಕೆ.ಜಿ.ರಮ್ಯ ಮೂರ್ನಾಡುರವರು ರಚಿಸಿದ ಕವನ ಸಂಕಲನಕ್ಕೆ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದ್ದಾರೆ.
-ಕೆ.ಜಿ.ರಮ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net