

ಸಿದ್ದಾಪುರ: ಸಮೀಪದ ಬೆನ್ನೂರು ಗ್ರಾಮಸ್ಥರು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ದಾಸೋಹಕ್ಕೆ ಬುಧವಾರ 20 ಕ್ವಿಂಟಾಲ್ ಅಕ್ಕಿಯನ್ನು ದೇಣಿಗೆಯಾಗಿ ನೀಡಿದರು.
ಗ್ರಾಮಸ್ಥ ಸೋಮಯ್ಯಸ್ವಾಮಿ ಮಾತನಾಡಿ, ಗವಿಸಿದ್ಧೇಶ್ವರ ಮಠ ಅನ್ನ, ಅಕ್ಷರ, ಆರೋಗ್ಯ ಎಂಬ ತ್ರಿವಿಧ ದಾಸೋಹಕ್ಕೆ ಹೆಸರಾಗಿದೆ. ಜ್ಞಾನ ದಾಸೋಹ ಮತ್ತು ಸಾಮಾಜಿಕ ಕಳಕಳಿಯ ಶಕ್ತಿ ಕೇಂದ್ರಗಳಲ್ಲಿ ಒಂದಾಗಿದೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುತ್ತಿದೆ. ಜಾತ್ರೆಗೆ ಗ್ರಾಮದಿಂದ ಮಠಕ್ಕೆ 20 ಕ್ವಿಂಟಾಲ್ ಅಕ್ಕಿ ದೇಣಿಗೆಯಾಗಿ ನೀಡಲಾಗಿದೆ ಎಂದು ತಿಳಿಸಿದರು.