

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ)ಐದು ನಗರ ಪಾಲಿಕೆಗಳ ಕರಡು ವಾರ್ಡ್ವಾರು ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಯನ್ನು ಸರ್ಕಾರ ಪ್ರಕಟಗೊಳಿಸಿದ್ದು, ನಾಗರಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳಿಗೆ ಮುಕ್ತವಾಗಿ ಆಹ್ವಾನಿಸಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ& 2024 ಅನ್ನು ಸರ್ಕಾರವು ಮೇ 15-ರಿಂದ ಜಾರಿಗೆ ತಂದಿತ್ತು. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಪೂರ್ವ ಪಾಲಿಕೆ, ಪಶ್ಚಿಮ ಪಾಲಿಕೆ, ಉತ್ತರ ಪಾಲಿಕೆ, ದಕ್ಷಿಣ ಪಾಲಿಕೆಗಳಿಗೆ ಸಂಬಂಧಿಸಿದಂತೆ ವಾರ್ಡ್ಗಳ ಪುನರ್ ವಿಂಗಡಣೆಗಾಗಿ 3 ತಿಂಗಳ ಅವಧಿಗೆ ಸೀಮಿತವಾಗಿ, ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು.
ಸೆ.2-0ರಂದು ನೂತನ ನಗರ ಪಾಲಿಕೆಗಳಿಗೆ ವಾರ್ಡ್ಗಳ ಪುನರ್ ವಿಂಗಡಣೆಯನ್ನು ಮಾಡಲು ಮಾರ್ಗಸೂಚಿಗಳನ್ನು ರಚಿಸಲಾಗಿತ್ತು. ಅದರಂತೆ ಮಂಗಳವಾರ ವಾರ್ಡ್ಗಳ ಪುನರ್ ವಿಂಗಡಣಾ ಆಯೋಗವು ಸರ್ಕಾರಕ್ಕೆ ವಾರ್ಡ್ಗಳ ಪುನರ್ ವಿಂಗಡಣಾ ವರದಿಯನ್ನು ಸಲ್ಲಿಸಿರುತ್ತದೆ.
2011ರ ಜನಗಣತಿಯ ಆಧಾರದ ಮೇರೆಗೆ, ಗ್ರೇಟರ್ ಬೆಂಗಳೂರು ಪ್ರದೇಶದ 5 ನಗರ ಪಾಲಿಕೆಗಳ ಕರಡು ವಾರ್ಡ್ವಾರು ಕ್ಷೇತ್ರ ಪುನರ್ ವಿಂಗಡಣೆಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
ಈ ಬಗ್ಗೆ ಯಾವುದೇ ಆಕ್ಷೇಪಣೆ / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳು ತಮ್ಮ ಪೂರ್ಣ ವಿಳಾಸ. ಸಹಿಯೊಂದಿಗೆ ಸೂಕ್ತ ಕಾರಣ-ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆ / ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 436, 4ನೇ ಮಹಡಿ, ವಿಕಾಸಸೌಧ, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಲು ಕೋರಿದೆ.
ನಿಗದಿತ ಅವಧಿಯಲ್ಲಿ ಸ್ವೀಕೃತಗೊಂಡ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಶೀಲಿಸಿ, ವಾರ್ಡ್ವಾರು ಕ್ಷೇತ್ರ ಪುನರ್ವಿಂಗಡಣೆಯನ್ನು ಅಂತಿಮಗೊಳಿಸಲು ಕ್ರಮವಹಿಸಲಾಗುವುದು.
ಪಾಲಿಕೆ ವಾರ್ಡ್ಗಳ ಸಂಖ್ಯೆ
ಕೇಂದ್ರ 63
ದಣ 72
ಪೂರ್ವ 50
ಪಶ್ಚಿಮ 111
ಉತ್ತರ 72
ಒಟ್ಟು 368