ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಸಜ್ಜಾಗಿ

jodo
ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಡಾ. ಕೆ.ಪಿ.ಅಂಶುಮಂತ್, ಗಾಯತ್ರಿ ಶಾಂತೇಗೌಡ, ಎಂ.ಎಲ್.ಮೂರ್ತಿ ಇತರರಿದ್ದರು.
Published on

ಚಿಕ್ಕಮಗಳೂರು: ದೇಶದಲ್ಲಿ ಜನ ವಿರೋಧಿ ಸರ್ಕಾರವನ್ನು ತೊಲಗಿಸುವ ಉದ್ದೇಶದಿಂದ ನಡೆಸಿದ ಭಾರತ್ ಜೋಡೋ ಯಾತ್ರೆಯ ಪರಿಣಾಮ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.

ಗುರುವಾರ ನಡೆದ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆ ಮೆರವಣಿಯಲ್ಲಿ ಮಾತನಾಡಿ, ದೇಶದ ಸಂಪತ್ತನ್ನು ಕೆಲವೇ ಶ್ರೀಮಂತರ ಕೈಗೆ ಬಿಜೆಪಿ ಸರ್ಕಾರ ನೀಡುತ್ತಿದೆ. ಇದರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಕೆಲಸ ರಾಜ್ಯದಿಂದ ಶುರುವಾಗಬೇಕು ಎಂದರು.
ಬೋಳರಾಮೇಶ್ವರ ದೇವಾಲಯದ ಸಮೀಪ ಪ್ರಾರಂಭವಾದ ಮೆರವಣಿಗೆ ಮೆಸ್ಕಾಂ ರಸ್ತೆ, ಬಸವನಹಳ್ಳಿ ರಸ್ತೆ, ಹನುಮಂತಪ್ಪ ವೃತ್ತ, ಎಂಜಿ ರಸ್ತೆ ಮೂಲಕ ಆಜಾದ್ ವೃತ್ತದಲ್ಲಿ ಅಂತ್ಯಗೊಂಡಿತು.
ಶಾಸಕರಾದ ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ, ಎಚ್.ಎಚ್.ದೇವರಾಜ್, ಸತೀಶ್, ಡಿ.ಎಲ್.ವಿಜಯ್‌ಕುಮಾರ್, ಗಾಯತ್ರಿ ಶಾಂತೇಗೌಡ, ಎಂ.ಎಲ್.ಮೂರ್ತಿ, ಕೆ.ಭರತ್, ಎಚ್.ಪಿ.ಮಂಜೇಗೌಡ, ತನೋಜ್, ಎಂ.ಡಿ.ರಮೇಶ್, ಜಯರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net