ಗೀಗೀ ಪದ ಭಜನೆ, ಅನ್ನಸಂತರ್ಪಣೆ ನಾಳೆ

ambedkar
Published on

ಚಿತ್ತಾಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನದ ನಿಮಿತ್ತ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಅಂಬೇಡ್ಕರ್ ವೃತ್ತದಲ್ಲಿ 6ರಂದು ಬೆಳಗ್ಗೆ 11ಕ್ಕೆ ಅನ್ನಸಂತರ್ಪಣೆ ಹಾಗೂ ಸಂಜೆ 7.30ಕ್ಕೆ ಬಸವರಾಜ ಹಾಲಕೂಡ ಅವರಿಂದ ಗೀಗೀ ಪದ, ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಪ್ರಮುಖರು ತಿಳಿಸಿದ್ದಾರೆ.

ಶ್ರೀ ಸೋಮಶೇಖರ ಶಿವಾಚಾರ್ಯರು ಸಾನ್ನಿಧ್ಯ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಸದಸ್ಯ ನಾಗರಡ್ಡಿ ಪಾಟೀಲ್ ಕರದಾಳ ಉದ್ಘಾಟಿಸುವರು. ಪುರಸಭೆ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಕಾಶಿ, ಮಲ್ಲಿಕಾರ್ಜುನ ಕಾಳಗಿ, ಜಿಪಂ ಮಾಜಿ ಸದಸ್ಯರಾದ ಶಿವರುದ್ರ ಭೀಣಿ, ಬಸವರಾಜ ಬೆಣ್ಣೂರಕರ್, ದಸಂಸ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಬೆಣ್ಣೂರಕರ್ ಇತರರು ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net