20ರಂದು ಗೀತ ಸಿಂಚನ ಕಾರ್ಯಕ್ರಮ

music programme
Published on

ಮೈಸೂರು: ಹಳೇ ಬೇರು ಹೊಸ ಚಿಗುರು ಕಲ್ಚರಲ್ ಟ್ರಸ್ಟ್‌ನ 9ನೇ ವಾರ್ಷಿಕೋತ್ಸವ ಅಂಗವಾಗಿ ಕನ್ನಡ, ಹಿಂದೆ ಹಳೇ ಗೀತೆಗಳ ‘ಮಾಮರವೆಲ್ಲೋ ಕೋಗಿಲೆ ಎಲ್ಲೋ ಗೀತ ಸಿಂಚನ’ ಕಾರ್ಯಕ್ರಮವನ್ನು ಫೆ.20ರಂದು ಸಂಜೆ 5 ಗಂಟೆಗೆ ನಾದಬ್ರಹ್ಮ ಸಂಗೀತ ಸಭಾದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಸಂಸ್ಥಾಪಕ ರೇವಣ್ಣ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸುವರು. ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಉದ್ಯಮಿಗಳಾದ ಡಾ.ಜಿ.ರವಿ, ರವಿಗೌಡ, ವಾದಿರಾಜ್, ರಾಧಾಕೃಷ್ಣ, ಆನಂದ್ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗುವ ಗಾಯಕ, ಗಾಯಕಿಯರು 25ಕ್ಕೂ ಅಧಿಕ ಕನ್ನಡ, ಹಿಂದಿ ಗೀತೆಗಳನ್ನು ಹಾಡಿ ರಂಜಿಸಲಿದ್ದಾರೆ. ಇದೇ ವೇಳೆ ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ಗಾಯಕರಾದ ಲಕ್ಷ್ಮೀ, ಶ್ರೀಕಂಠ ರಾವ್, ವಾಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net