

ವಿಜಯವಾಣಿ ಸುದ್ದಿಜಾಲ ಉಡುಪಿ
ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಸಾಂಪ್ರದಾಯಿಕವಾಗಿ ಸಿಎಂ ಸಾವಂತ್ ಅವರನ್ನು ಸ್ವಾಗತಿಸಿ, ಗೌರವಿಸಲಾಯಿತು. ಬಳಿಕ ಅವರು ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣದೇವರ ದರ್ಶನ ಪಡೆದು, ಗೀತಾ ಮಂದಿರಕ್ಕೆ ಆಗಮಿಸಿದರು.
ಸುಗುಣೇಂದ್ರ ಶ್ರೀಗಳು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಬಳಿಕ ಗೋವಾ ಸಿಎಂ, ಶ್ರೀಗಳಿಂದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದರು.
ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಇತರರಿದ್ದರು.