

ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೀತಾ ರಮೇಶ್ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಒಪ್ಪಂದದಂತೆ ಸುಶೀಲಾ ಶೆಟ್ಟಿ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಶನಿವಾರ ಚುನಾವಣೆ ನಿಗದಿಯಾಗಿತ್ತು. ತಹಸೀಲ್ದಾರ್ ಎಂ.ಲಿಂಗರಾಜ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.
ಕಾಂಗ್ರೆಸ್ ಬೆಂಬಲಿತ ಮೂವರು ಮಹಿಳಾ ಸದಸ್ಯರಲ್ಲಿ ಅಧ್ಯಕ್ಷ ಸ್ಥಾನದ ಹಂಚಿಕೆಯಾಗಿದ್ದು ಉಳಿದಿರುವ ಮುಂದಿನ ಎಂಟು ತಿಂಗಳು ಗೀತಾ ರಮೇಶ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.
ಮಾಜಿ ಕಿಮ್ಮನೆ ರತ್ನಾಕರ್, ಕೆಪಿಸಿಸಿ ಸಹಕಾರ ವಿಭಾಗ ಸಂಚಾಲಕ ಆರ್.ಎಂ.ಮಂಜುನಾಥ ಗೌಡ, ತೀರ್ಥಹಳ್ಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಪಪಂ ಉಪಾಧ್ಯಕ್ಷ ರಹಮತ್‌ಉಲ್ಲಾ ಅಸಾದಿ, ಪ್ರಮುಖ ಡಿ.ಎಸ್.ವಿಶ್ವನಾಥ ಶೆಟ್ಟಿ ಇತರರಿದ್ದರು.