

ಗುರುಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಗುರುಪುರ ವತಿಯಿಂದ ಶನಿವಾರ ಪಿಲಿಕುಳದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ನಡೆಯಿತು.
ಸ್ಥಳೀಯ ಸಂಸ್ಥೆ ಅಧ್ಯಕ್ಷ ಶೋಹನ್ ಅತಿಕಾರಿ ಸ್ಪರ್ಧೆ ಉದ್ಘಾಟಿಸಿದರು. ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತೆ ಜಯಶ್ರೀ ಸ್ಪರ್ಧೆಯ ನಿಯಮ ತಿಳಿಸಿದರು. ತೀರ್ಪುಗಾರರಾದ ಗ್ರೆಟ್ಟಾ ಮಿನೆಜಸ್, ಕವಿತಾ ಪಿ., ಶಾಂತಿ ಸಿಕ್ವೇರ ಉಪಸ್ಥಿತರಿದ್ದರು. ಕಾರ್ಯದರ್ಶಿ ಜಯಲಕ್ಷ್ಮೀ ಶೆಟ್ಟಿ ಸ್ವಾಗತಿಸಿದರು. ಸಂಸ್ಥೆಯ ಸಹ ಕಾರ್ಯದರ್ಶಿ ಪೂರ್ಣಿಮಾ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಸುನೀಲ್ ಜಿ. ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ವಿಜೇತ ತಂಡಗಳಿಗೆ ಪ್ರಶಸ್ತಿ ಫಲಕ, ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯದರ್ಶಿ ಜಯಲಕ್ಷ್ಮೀ ವಂದಿಸಿದರು.