

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸ್ವೀಕರಿಸಿದರು.
ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಕ್ರೆಡಿಲ್ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರಿಗೆ ಸಾಥ್ ನೀಡಿದರು.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ರಾರ್ಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಬೊಂಬೆ ಕುಣಿತ, ವಾದ್ಯ ಮೇಳಗಳು ಮೆರವಣಿಗೆಗೆ ರಂಗು ತುಂಬಿದವು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದವರಿಗೆ ಮಜ್ಜಿಗೆ, ನೀರಿನ ಪ್ಯಾಕೆಟ್ ಹಂಚಲಾಯಿತು. ಗಾಂಧಿಬಜಾರ್‌ನಲ್ಲಿ ಗೀತಾಗೆ ಬೃಹತ್ ಹೂವಿನ ಹಾಕಿ ಉಡಿ ತುಂಬಿದರು. ಸೇಬು ಹಣ್ಣಿನ ಹಾರ ಹಾಕಿದರು. ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಪ್ಲೇಕಾರ್ಡ್ ರಾರಾಜಿಸಿದವು.
ನಟ ಶಿವರಾಜ್‌ಕುಮಾರ್, ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್ ಸೇರಿ ಅನೇಕರು ಸಾಥ್ ನೀಡಿದರು.