

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2022ರ ಉಪವಿಧಿಗಳನ್ನು ತಿದ್ದುಪಡಿ ಮಾಡಲು ಉದ್ದೇಶಿಸಲಾಗಿದ್ದು, ಸರ್ವ ಸದಸ್ಯರ ಮಹಾಸಭೆಯನ್ನು ವರ್ಚುವಲ್ /ವಾಸ್ತವ ವಿಧಾನದ ಮೂಲಕ ಅಕ್ಟೋಬರ್ 01 ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ರಾಜ್ಯ ನೌಕಾರಿಯ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ರಸ್ತೆಯಲ್ಲಿನ ಗೋಶಾಲೆ ಹತ್ತಿರದ ಮಹಾವೀರ ಸಮುದಾಯ ಭವನದಲ್ಲಿ ಸರ್ವ ಸದಸ್ಯರ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ.
ಸಂಘದ ಸದಸ್ಯರು ವಿಶೇಷ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮೈಸೂರು ಜಿಲ್ಲಾ ಸರ್ಕಾರಿ ನೌಕರರು ಸಂಘದ ವತಿಯಿಂದ ತಿಳಿಸಲಾಗಿದೆ. ವರ್ಚುವಲ್ ಸಭೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದ್ದು, http://www.bit.ly/ksgeasdplgbm ಲಿಂಕ್ ಮೂಲಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಜಿಲ್ಲಾಧ್ಯಕ್ಷರಾದ ಜೆ ಗೋವಿಂದರಾಜು ದೂ.ಸಂ: 9845767004, ಕಾರ್ಯದರ್ಶಿಗಳಾದ ರೇವಣ್ಣ ಅವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.