ಮಹನೀಯರು ಜಾತಿಗೆ ಸೀಮಿತವಾಗದಿರಲಿ

ಕೆ.ಆರ್.ನಗರದ ತಾಲೂಕು ಕಚೇರಿಯಲ್ಲಿ ನಡೆದ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ಸಿ.ಎಸ್.ಪೂರ್ಣಿಮಾ, ಜಿ.ಕೆ.ಹರೀಶ್, ಡಾ.ಜಯಣ್ಣ ಮತ್ತಿತರರಿದ್ದರು.
ಕೆ.ಆರ್.ನಗರದ ತಾಲೂಕು ಕಚೇರಿಯಲ್ಲಿ ನಡೆದ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ಸಿ.ಎಸ್.ಪೂರ್ಣಿಮಾ, ಜಿ.ಕೆ.ಹರೀಶ್, ಡಾ.ಜಯಣ್ಣ ಮತ್ತಿತರರಿದ್ದರು.
Published on

ಕೆ.ಆರ್.ನಗರ: ರಾಷ್ಟ್ರಕವಿ ಕುವೆಂಪು ತಮ್ಮ ಸಾಹಿತ್ಯ, ಸಿದ್ಧಾಂತ ಮತ್ತು ಆದರ್ಶಗಳ ಮೂಲಕ ಸಮಾಜದ ಉದ್ಧಾರಕ್ಕಾಗಿ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಇವರ ಹಾದಿನಲ್ಲಿ ನಾವು ಸಾಗಿದಾಗ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶಾಸಕ ಡಿ.ರವಿಶಂಕರ್ ಅಭಿಪ್ರಾಯಪಟ್ಟರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಾಡಹಬ್ಬಗಳ ಸಮಿತಿ ವತಿಯಿಂದ ನಡೆದ ಕುವೆಂಪು ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಶತಮಾನದ ಕವಿಯಾಗಿದ್ದಾರೆ ಎಂದರು.

ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ನಿರ್ಧರಿಸಿದ್ದು, ಇದಕ್ಕೆ ಸರ್ವರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಶಾಸಕರು, ಮಹನೀಯರ ಜಯಂತಿಗಳನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸರ್ವರೂ ಸೇರಿಕೊಂಡು ಆಚರಣೆ ಮಾಡಬೇಕು ಎಂದರು.

ನಾಡಹಬ್ಬಗಳ ಸಮಿತಿಯಿಂದ ಆಚರಿಸುವ ಜಯಂತಿಗಳು ಮತ್ತು ಪೂರ್ವಭಾವಿ ಸಭೆಗಳಿಗೆ ಗೈರು ಹಾಜರಾಗದಂತೆ ಅಧಿಕಾರಿಗಳಿಗೆ ಸೂಚಿಸಿದರೂ ಕೂಡ ಕೆಲವು ಅಧಿಕಾರಿಗಳು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತಹಸೀಲ್ದಾರ್ ಅವರು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ತಮ್ಮ ಜವಾಬ್ದಾರಿ ಅರಿತು ನಮ್ಮೊಡನೆ ಕೆಲಸ ಮಾಡಲು ಇಷ್ಟವಿಲ್ಲದ ಅಧಿಕಾರಿಗಳು ಇಲ್ಲಿಂದ ವರ್ಗಾವಣೆ ಮಾಡಿಸಿಕೊಂಡು ಹೋಗಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮವನ್ನು ಕುರಿತು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಟಿ.ಅಣ್ಣೇಗೌಡ, ಯುವ ರೈತ ವೇದಿಕೆ ಅಧ್ಯಕ್ಷ ಅರ್ಜುನಹಳ್ಳಿ ರಾಮ್‌ಪ್ರಸಾದ್ ಮಾತನಾಡಿದರು. ಸಾಹಿತಿ ತಿಪ್ಪೂರುಕೃಷ್ಣ, ಪತ್ರಕರ್ತ ರಾ.ಸುರೇಶ್, ಅರ್ಜುನಹಳ್ಳಿ ರಾಮ್‌ಪ್ರಸಾದ್ ಅವರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.

ತಾಪಂ ಇಒ ಜಿ.ಕೆ.ಹರೀಶ್, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ಬಿಇಒ ಆರ್.ಕೃಷ್ಣಪ್ಪ, ಸಮಾಜ ಕಲ್ಯಾಣಾಧಿಕಾರಿ ಎಸ್.ಎಂ.ಅಶೋಕ್‌ಕುಮಾರ್, ಬಿಸಿಎಂ ಅಧಿಕಾರಿ ಚಂದ್ರಕಲಾ, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎಂ.ಎಸ್.ನಾಗೇಂದ್ರ, ಸಿಡಿಪಿಒ ಅಣ್ಣಯ್ಯ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ರೈತ ಮುಖಂಡ ಗರುಡಗಂಭಸ್ವಾಮಿ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ಪ್ರದೀಪ್‌ಕುಮಾರ್, ಬಿ.ಸಿದ್ದೇಗೌಡ, ಮುಖಂಡರಾದ ಅಣ್ಣಾಜಿಗೌಡ, ಹೊಸಕೋಟೆ ಚೆಲುವರಾಜು, ಮಾದಶೆಟ್ಟಿ, ಲಕ್ಷ್ಮಿಕಾಂತ್, ನೀಲಕಂಠೇಗೌಡ, ಕಾಳಿಕುಮಾರ್, ಭಾಸ್ಕರ್, ಎಚ್.ಎಚ್.ನಾಗೇಂದ್ರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net